ಅಭಿಪ್ರಾಯ / ಸಲಹೆಗಳು

ನಮ್ಮ ಬಗ್ಗೆ

ದೇಶದ ದುಡಿಯುವ ವರ್ಗದಲ್ಲಿ ಹೆಚ್ಚು ಕಾರ್ಮಿಕರು ಅಸಂಘಟಿತ ವಲಯದಲ್ಲಿ ಇರುವುದಾಗಿ ಅಂದಾಜಿಸಿದ್ದು, ಅವರು ಶಾಸನಬದ್ಧ ಸೌಲಭ್ಯಗಳಿಂದ ವಂಚಿತರಾಗಿರುವ ಸಂಭವ ಹೆಚ್ಚಾಗಿರುತ್ತದೆ. ಇವರ ಜೀವನ ಮಟ್ಟವನ್ನು ಉತ್ತಮಪಡಿಸಿ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸಲು ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಕಾಯ್ದೆಯನ್ನು, 2008 ರಲ್ಲಿ ಜಾರಿಗೆ ತಂದಿರುತ್ತದೆ. ಇದಕ್ಕೆ ಅನುಗುಣವಾಗಿ ಕರ್ನಾಟಕ ರಾಜ್ಯವು ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ (ಕರ್ನಾಟಕ) ನಿಯಮಗಳು, 2009 ಅನ್ನು ರಚಿಸಿರುತ್ತದೆ. ಅಲ್ಲದೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯನ್ನು ರಚಿಸಿರುತ್ತದೆ.

 

ಈ ಮಂಡಳಿಗೆ ಮಾನ್ಯ ಕಾರ್ಮಿಕ ಸಚಿವರು ಪದನಿಮಿತ್ತ ಅಧ್ಯಕ್ಷರಾಗಿದ್ದು, ಸರ್ಕಾರದ ಕಾರ್ಯದರ್ಶಿಗಳು ಕಾರ್ಮಿಕ ಇಲಾಖೆ ಇವರು ಪದನಿಮಿತ್ತ ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ. ಮಂಡಳಿಯಲ್ಲಿ ಅಸಂಘಟಿತ ವಲಯದ 7 ಜನ ಮಾಲೀಕ, 7 ಜನ ಕಾರ್ಮಿಕ ಪ್ರತಿನಿಧಿಗಳು, 5 ಜನ ನಾಗರೀಕ ಸಮಾಜದ ಗಣ್ಯ ವ್ಯಕ್ತಿಗಳು, ವಿಧಾನಸಭೆಯ ಇಬ್ಬರು ಚುನಾಯಿತ ಪ್ರತಿನಿಧಿಗಳು ಹಾಗೂ 7 ಜನ ಸರ್ಕಾರದ ಹಿರಿಯ ಅಧಿಕಾರಿಗಳನ್ನು ಒಳಗೊಂಡಂತೆ ಒಟ್ಟು 28 ಮಂದಿ ಸದಸ್ಯರಿರುತ್ತಾರೆ.  ಈವರೆಗೆ ಮಂಡಳಿಯಲ್ಲಿ 12 ಸಾಮಾನ್ಯ ಸಭೆಗಳನ್ನು ನಡೆಸಲಾಗಿದೆ.

ಇತ್ತೀಚಿನ ನವೀಕರಣ​ : 20-01-2020 11:50 AM ಅನುಮೋದಕರು: Approver Ksuwssb


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080