ಅಭಿಪ್ರಾಯ / ಸಲಹೆಗಳು

ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ

ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ:-

() ಸ್ಮಾರ್ಟ್ ಕಾರ್ಡ್ ಸೌಲಭ್ಯ

ಯೋಜನೆಯಡಿ 11 ಅಸಂಘಟಿತ ವಲಯಗಳಾದ “ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ‍್ಸ್, ಮೆಕ್ಯಾನಿಕ್, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು ಹಾಗೂ ಭಟ್ಟಿ ಕಾರ್ಮಿಕ”ರನ್ನು ಏಕ ಶೀರ್ಷಿಕೆ ಮತ್ತು ಏಕ ಚಿಹ್ನೆಯಡಿ ನೋಂದಾಯಿಸಿ “ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ”ಯಡಿ ಗುರುತಿನ ಚೀಟಿಯನ್ನು ವಿತರಿಸಲಾಗುತ್ತಿದೆ.

            

() ಶ್ರಮ ಸಮ್ಮಾನ ಹಾಗೂ ವಿಶೇಷ ಪುರಸ್ಕಾರ ಪ್ರಶಸ್ತಿ:

             2018-19ನೇ ಸಾಲಿನಿಂದ, 11 ಅಸಂಘಟಿತ ವಲಯಗಳಾದ “ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ‍್ಸ್, ಮೆಕ್ಯಾನಿಕ್, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು ಹಾಗೂ ಭಟ್ಟಿ ಕಾರ್ಮಿಕ” ವಲಯಗಳಲ್ಲಿ  ವಿಶೇಷ ಸಾಧನೆ ಮಾಡಿದ ಕಾರ್ಮಿಕರನ್ನು ಗುರುತಿಸಿ,  ಆಯ್ಕೆಗೊಂಡ ಕಾರ್ಮಿಕರಿಗೆ ಮಾರ್ಚ್ 01 ರಂದು ನಡೆಯುವ ಕಾರ್ಮಿಕ ಸಮ್ಮಾನ ದಿನಾಚರಣೆಯ ಸಂದರ್ಭದಲ್ಲಿ ಸದರಿ 11 ವರ್ಗಗಳ ಕಾರ್ಮಿಕರಿಗೆ  ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

 

(ಇ) ವಿದೇಶಿ ಉದ್ಯೋಗ ಕೋಶ International Migration Centre-Karnataka(IMCK):- ಪ್ರತಿ ವರ್ಷ ರಾಜ್ಯದಾದ್ಯಂತ ಪರಿಣಿತ, ಅರೆಪರಿಣಿತ ಹಾಗೂ ಪರಿಣಿತರಲ್ಲದ ಸಹಸ್ರಾರು ಕಾರ್ಮಿಕರು ಉದ್ಯೋಗಕ್ಕಾಗಿ ವಿದೇಶಗಳಿಗೆ ತೆರಳುತ್ತಿದ್ದು, ಮಧ್ಯವರ್ತಿ ಸಂಸ್ಥೆಗಳಿಂದ ಶೋಷಣೆಗೆ ಒಳಗಾಗುತ್ತಿರುವುದನ್ನು ಗಮನಿಸಿ ಅವರ ಹಿತರಕ್ಷಣೆಗಾಗಿ ರಾಜ್ಯ ಸರ್ಕಾರವು ರಾಜ್ಯದಲ್ಲಿ ವಿದೇಶಿ ಉದ್ಯೋಗ ಕೋಶ (International Migration Centre-Karnataka(IMC-K))  ವನ್ನು ಸ್ಥಾಪಿಸಲು ನಿರ್ಧರಿಸಿದ್ದು, ಅರೆಪರಿಣಿತ ಹಾಗೂ ಪರಿಣಿತರಲ್ಲದ ಕಾರ್ಮಿಕರಿಗೆ ಸಂಬಂಧಪಟ್ಟ ಹೊಣೆಯನ್ನು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಗೆ ವಹಿಸಿಕೊಂಡಿದೆ.

              ಈ ದಿಶೆಯಲ್ಲಿ Protector General of Emigrants (PGE), Ministry of External Affairs (MEA) ಭಾರತ ಸರ್ಕಾರ ಇವರು, ಮಂಡಳಿಯನ್ನು Recruitment Agency(RA)  ಆಗಿ ನೇಮಕಾತಿ ಮಾಡಿರುತ್ತಾರೆ.

ಇತ್ತೀಚಿನ ನವೀಕರಣ​ : 13-12-2023 03:54 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080