ಅಭಿಪ್ರಾಯ / ಸಲಹೆಗಳು

ಆಶಾದೀಪ ಯೋಜನೆ

ಆಶಾದೀಪ ಯೋಜನೆ

ಕರ್ನಾಟಕ ರಾಜ್ಯ ಸರ್ಕಾರವು, ಖಾಸಗಿ ವಲಯದ ಉದ್ಯೋಗಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಹೆಚ್ಚು ಹೆಚ್ಚು ನೇಮಕಾತಿ ಮಾಡಿಕೊಳ್ಳಲು ಮಾಲೀಕರನ್ನು/ ಉದ್ಯೋಗದಾತರನ್ನು  ಉತ್ತೇಜಿಸುವ ದೃಷ್ಠಿಯಿಂದ ಹಾಗೂ ಈ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಖಾಸಗಿ ವಲಯದಲ್ಲಿ ಉದ್ಯೋಗಾವಕಾಶ ಪಡೆಯಲು ಅನುಕೂಲವಾಗುವಂತೆ “ಆಶಾದೀಪ” ಎಂಬ ನೂತನ  ಯೋಜನೆಯನ್ನು ರೂಪಿಸಿದೆ. ಈ ಯೋಜನೆಯನ್ನು ಕರ್ನಾಟಕ ರಾಜ್ಯ ಕಾರ್ಮಿಕರ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ (ಆಶಾದೀಪ ಯೋಜನೆ) ಸೊಸೈಟಿಯ ಮೂಲಕ ಜಾರಿಗೊಳಿಸಲಾಗುತ್ತಿದೆ.

ಯೋಜನೆಯ ಪ್ರಮುಖ ಉದ್ದೇಶಗಳು:-

  1. ಖಾಸಗಿ ವಲಯದ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಉದ್ಯೋಗ ದೊರಕಿಸಿಕೊಡುವುದು.
  2. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಸಾಮಾಜಿಕ ಹಾಗೂ ಆರ್ಥಿಕ ಜೀವನಮಟ್ಟವನ್ನು ಸುಧಾರಿಸುವುದು.
  3. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳುವುದನ್ನು ಉತ್ತೇಜಿಸಲು, ನೇಮಕಾತಿ ಮಾಡಿಕೊಂಡ ಸಂಸ್ಥೆಗಳಿಗೆ ಅಂತಹ ನೌಕರರ ಇ.ಎಸ್.ಐ. ಹಾಗೂ ಇ.ಪಿ.ಎಫ್, ವಂತಿಕೆಯನ್ನು ಮರು ಪಾವತಿಸುವ ಮೂಲಕ ಆರ್ಥಿಕ ಸಹಾಯ ನೀಡುವುದು.
  4. ತರಬೇತಿ ಪಡೆಯುವ ಅಪ್ರೆಂಟಿಸ್‍ಗಳಿಗೆ ಶಿಷ್ಯವೇತನ (Stipend) ನೀಡುವುದು.

 

 

ಯೋಜನೆಯ ಸೌಲಭ್ಯಗಳು:-

  • ಮಾಲೀಕರು ಪಾವತಿಸುವ ಇ.ಎಸ್.ಐ. ಮತ್ತು ಇ.ಪಿ.ಎಫ್. ವಂತಿಕೆ ಮರುಪಾವತಿ:- ಖಾಸಗಿ ವಲಯದ ಸಂಸ್ಥೆಗಳಲ್ಲಿ ಹೊಸದಾಗಿ ನೇಮಿಸಿಕೊಳ್ಳುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯೋಗಿಗಳಿಗೆ ಮಾಲೀಕರು/ಉದ್ಯೋಗದಾತರು ಕಡ್ಡಾಯವಾಗಿ ಪಾವತಿಸಬೇಕಾದ ಶಾಸನಬದ್ಧ ಭವಿಷ್ಯನಿಧಿ ಹಾಗೂ ಇ.ಎಸ್.ಐ. ವಂತಿಕೆಯನ್ನು ರಾಜ್ಯ ಸರ್ಕಾರದಿಂದ ಮಾಲೀಕರು/ ಉದ್ಯೋಗದಾತರಿಗೆ ಎರಡು ವರ್ಷಗಳ ಅವದಿ ವರೆಗೆ ಮಾಸಿಕ ಗರಿಷ್ಠ ತಲಾ ರೂ.3000/-ಗಳ ಮಿತಿಯೊಳಗೆ ಮರುಪಾವತಿ.

 

  • ಅಪ್ರೆಂಟಿಸ್ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳ ಶಿಷ್ಯವೇತನ (Stipend) ಮರುಪಾವತಿ:- ಒಂದು ವರ್ಷದ ಅವಧಿಯ ಸಾಮಾನ್ಯ (Normal) ಹಾಗೂ ಎರಡು ವರ್ಷಗಳ ಅವಧಿಯ ಸಮಗ್ರ (Comprehensive) ಅಪ್ರೆಂಟಿಸ್ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ಕಾಯ್ದೆ, 1961 ರನ್ವಯ ಪಾವತಿಸಬೇಕಾದ ಮಾಸಿಕ ಶಿಷ್ಯವೇತನ (Stipend) ಮೊತ್ತದಲ್ಲಿ 2/3 ರಷ್ಟು ಮೊತ್ತವನ್ನು ಮಾಸಿಕ ತಲಾ ರೂ.5000/- ಗಳ ಮಿತಿಯೊಳಗೆ ಮರುಪಾವತಿ.

 

  • ಅಪ್ರೆಂಟಿಸ್ ನಂತರ ಖಾಯಂ ಮಾಡಿದಲ್ಲಿ ವೇತನ ಮರುಪಾವತಿ:- ಅಪ್ರೆಂಟಿಸ್ ತರಬೇತಿ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನೇ ಖಾಯಂ ಹುದ್ದೆಗಳಲ್ಲಿ ನೇಮಕಾತಿ ಮಾಡಿಕೊಂಡಲ್ಲಿ, ಅಂತಹ ನೌಕರರಿಗೆ ಆಯಾ ಹುದ್ದೆಗಳಿಗೆ ಸರ್ಕಾರ ನಿಗದಿಪಡಿಸಿದ ಕನಿಷ್ಠ ವೇತನ ದರದಲ್ಲಿ ಶೇ.50 ರಷ್ಟು ಮೊತ್ತವನ್ನು ಮಾಸಿಕ ಗರಿಷ್ಠ ತಲಾ ರೂ. 7000/-ಗಳ ಮಿತಿಯೊಳಗೆ ಉದ್ಯೋಗದಾತರಿಗೆ ಒಂದು ವರ್ಷದ ಅವಧಿಗೆ ಮರುಪಾವತಿ ಮಾಡಲಾಗುತ್ತದೆ.

 

  • ಕೌಶಲ್ಯಾಭಿವೃದ್ಧಿ ಇಲಾಖೆಯ ಮುಖಾಂತರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿಗಳನ್ನು ಏರ್ಪಡಿಸಿ, ಸ್ವಾವಲಂಭಿಗಳಾಗಲು ಉತ್ತೇಜನ ನೀಡುವುದು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇತ್ತೀಚಿನ ನವೀಕರಣ​ : 05-03-2020 03:08 PM ಅನುಮೋದಕರು: Approver Ksuwssb



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080