ಅಭಿಪ್ರಾಯ / ಸಲಹೆಗಳು

ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‌ ಧನ್‌ ಯೋಜನೆ

ಪ್ರಧಾನ ಮಂತ್ರಿ ಶ್ರಮ್ ಯೋಗಿ ಮಾನ್-ಧನ್ ಯೋಜನಾ (ಪಿಎಮ್-ಎಸ್‌ವೈಎಂ)

(ದೇಶದ ಅಸಂಘಟಿತ ವಲಯದ ಕಾರ್ಮಿಕರಿಗೆ ಪಿಂಚಣಿ ಯೋಜನೆ)

ಭಾರತ ದೇಶದ ಅರ್ಧದಷ್ಟು ಆದಾಯವು ಅಸಂಘಟಿತ ವಲಯದ 42 ಕೋಟಿ ಕಾರ್ಮಿಕರಿಂದ ಉತ್ಪಾದನೆಯಾಗುತ್ತಿದೆ. ನಮ್ಮ ದೈನಂದಿನ ಜೀವನದಲ್ಲಿ ಬೀದಿ ವ್ಯಾಪಾರಿಗಳು, ರಿಕ್ಷಾ ಎಳೆಯುವವರು, ಕಟ್ಟಡ ಕಾರ್ಮಿಕರು, ಮನೆಕೆಲಸದವರು, ಕೃಷಿ ಕಾರ್ಮಿಕರು, ಕಸ ಹೆಕ್ಕುವವರು, ಬೀಡಿ ಕಾರ್ಮಿಕರು, ಹ್ಯಾಡ್‍ಲೂಮ್ ಕಾರ್ಮಿಕರು, ಚರ್ಮೋದ್ಯಮ, ಚಿಂದಿ ಆಯುವವರು ಮತ್ತು ಇತರೇ ವಿವಿಧ ವೃತ್ತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಸಂಘಟಿತ ಕಾರ್ಮಿಕರು ಕಂಡು ಬರುತ್ತಾರೆ.

ಈ ಅಸಂಘಟಿತ ವಲಯದ ಕಾರ್ಮಿಕರಿಗೆ ಅವರ ವಯೋವೃದ್ಧ ವೇಳೆಯಲ್ಲಿ ರಕ್ಷಣೆ ಕಲ್ಪಿಸಲು ಪಿಂಚಣಿ ಸೌಲಭ್ಯವನ್ನು ವಿಸ್ತರಿಸಿ ಭಾರತ ಸರ್ಕಾರವು ಪ್ರಧಾನ ಮಂತ್ರಿ ಶ್ರಮ್ ಯೋಗಿ ಮಾನ್-ಧನ್ (ಪಿಎಮ್-ಸಿಮ್) ಎಂಬ ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೆ ತಂದಿರುತ್ತದೆ. 

 1. ಯೋಜನೆಗೆ ಸೇರಲು ಅರ್ಹತೆಗಳು:
 • 18 ರಿಂದ 40 ವರ್ಷದೊಳಗಾಗಿರಬೇಕು.
 • ಅವರ ಮಾಸಿಕ ಆದಾಯ ರೂ.15,000/ ಅಥವಾ ಅದಕ್ಕಿಂತ ಕಡಿಮೆ ಇರಬೇಕು.
 • ಆದಾಯ ತೆರಿಗೆ ಪಾವತಿಸುವವರಾಗಿರಬಾರದು.
 • ಸಂಘಟಿತ ವಲಯದ ಕಾರ್ಮಿಕರಾಗಿರಬಾರದು ಹಾಗೂ ಇ.ಎಸ್.ಐ/ಪಿ.ಎಫ್/ಎನ್.ಪಿ.ಎಸ್ ಯೋಜನೆಗೆ ಒಳಪಟ್ಟಿರಬಾರದು.
 1. ಯೋಜನೆ ನೋಂದಣಿ ವಿಧಾನಗಳು:
 • ಅರ್ಹ ಫಲಾನುಭವಿಗಳು ಹತ್ತಿರದ “ಸಾಮಾನ್ಯ ಸೇವಾ ಕೇಂದ್ರ (ಸಿ.ಎಸ್.ಸಿ)” ಗಳಲ್ಲಿ ಯೋಜನೆಯಡಿ ನೋಂದಾಯಿಸಬಹುದಾಗಿರುತ್ತದೆ. ಸಿ.ಎಸ್.ಸಿ.ಗಳ ವಿವರಗಳನ್ನು ಹತ್ತಿರದ ಎಲ್.ಐ.ಸಿ. ಶಾಖೆಗಳು, ಕಾರ್ಮಿಕ ಇಲಾಖೆ, ಕೇಂದ್ರ ಸರ್ಕಾರದ ಕಾರ್ಮಿಕ ಇಲಾಖೆ, ಇ.ಎಸ್.ಐ. ಕಾರ್ಪೋರೇಷನ್, ಹಾಗೂ ಭವಿಷ್ಯನಿಧಿ ಇಲಾಖೆ ಹಾಗೂ ಅವರ ವೆಬ್ ವಿಳಾಸಗಳು ಹಾಗೂ ವೆಬ್ ವಿಳಾಸ http://locator.csccloud.in ಗಳಲ್ಲಿ ಪಡೆಯಬಹುದಾಗಿರುತ್ತದೆ.
 • ಫಲಾನುಭವಿಗಳು ತಮ್ಮೊಂದಿಗೆ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಐ.ಎಫ್.ಎಸ್.ಸಿ ಕೋಡ್ ವಿವರಗಳೊಂದಿಗೆ (ಬ್ಯಾಂಕ್ ಪಾಸ್ ಪುಸ್ತಕ/ಚೆಕ್ ಪುಸ್ತಕ/ಬ್ಯಾಂಕ್ ಸ್ಟೇಟ್‍ಮೆಂಟ್) ಮತ್ತು ಮೊಬೈಲ್‍ನೊಂದಿಗೆ ಕಾಮನ್ ಸರ್ವಿಸ್ ಸೆಂಟರ್‍ಗಳಿಗೆ ತೆರಳುವುದು.
 • ಅನುಬಂದಲ್ಲಿ ತಿಳಿಸಿರುವಂತೆ ವಯಸ್ಸಿಗೆ ಅನುಗುಣವಾಗಿ ಆರಂಭಿಕ ವಂತಿಗೆಯನ್ನು ನಗದು ರೂಪದಲ್ಲಿ ಪಾವತಿಸಲು ತೆರಳುವುದು. ತದ ನಂತರ ಮಾಸಿಕ ವಂತಿಕೆಯನ್ನು ಅವರ ಖಾತೆಯಿಂದ ಆಟೋ-ಡೆಬಿಟ್ ಮಾಡಲಾಗುವುದು.
 1. ಯೋಜನೆಯ ಸೌಲಭ್ಯಗಳು
 • ಕೇಂದ್ರ ಸರ್ಕಾರವು ಚಂದಾದಾರರು ಪಾವತಿಸುವ ವಂತಿಕೆಗೆ ಸಮಾನಾಂತರ ವಂತಿಕೆಯನ್ನು ಪಾವತಿಸುತ್ತದೆ.
 • 60 ವರ್ಷ ಪೂರ್ಣಗೊಂಡ ನಂತರ ಚಂದಾದಾರರು (ಫಲಾನುಭವಿಯು) ತಿಂಗಳಿಗೆ ನಿಶ್ಚಿತ ರೂ.3,000/-ಗಳ ಮಾಸಿಕ ಪಿಂಚಣಿಯನ್ನು ಪಡೆಯಲು ಅರ್ಹರಾಗುತ್ತಾರೆ.
 • ಪಿಂಚಣಿ ಆರಂಭಗೊಂಡ ನಂತರ ಚಂದಾದಾರರು ಮೃತ ಪಟ್ಟಲ್ಲಿ ಅವರ ಪತ್ನಿ/ಪತಿ ಪಿಂಚಣಿಯ ಶೆ.50 ರಷ್ಟು ಪಿಂಚಣೆಯನ್ನು ಪಡೆಯಲು ಅರ್ಹರು.
 • ಫಲಾನುಭವಿಯು ನಿರಂತರವಾಗಿ ವಂತಿಕೆಯನ್ನು ಪಾವತಿಸಿದ್ದು ಅವರು 60 ವರ್ಷದ ಒಳಗಾಗಿ ಮೃತ ಪಟ್ಟಲ್ಲಿ ಅವನು/ ಅವಳ ಸಂಗಾತಿಯು ತದನಂತರವೂ ಯೋಜನೆಗೆ ಸೇರಬಹುದಾಗಿದ್ದು ವಂತಿಕೆಯನ್ನು ಪಾವತಿಸಿ ಮುಂದುವರಿಸಬಹುದಾಗಿರುತ್ತದೆ.
 • ಚಂದಾದಾರರು ಯೋಜನೆಯಿಂದ 60 ವರ್ಷ ಪೂರ್ವದಲ್ಲೇ (ಮಧ್ಯದಿಂದಲೇ) ನಿರ್ಗಮಿಸಿದಲ್ಲಿ ಅವರು ಪಾವತಿಸಿರುವ ವಂತಿಕೆಯನ್ನು ಮಾತ್ರ ಬಡ್ಡಿಯೊಂದಿಗೆ ಹಿಂಪಡೆಯಲು ಅರ್ಹರಾಗಿರುತ್ತಾರೆ.

ಪ್ರಧಾನ ಮಂತ್ರಿ ಶ್ರಮ್ ಯೋಗಿ ಮಾನ್-ಧನ್ ಯೋಜನೆ ವಂತಿಕೆಯ ಚಾರ್ಟ್‍ನ ವಿವರಗಳು

ಪ್ರವೇಶ ವಯಸ್ಸು

ವಯೋನಿವೃತ್ತಿಯ ವಯಸ್ಸು

ಸದಸ್ಯರ ಮಾಸಿಕ ವಂತಿಕೆ (ರೂಗಳಲ್ಲಿ)

 

ಕೇಂದ್ರ ಸರ್ಕಾರದ ಸಮಾನಾಂತರ ಮಾಸಿಕ ವಂತಿಕೆ (ರೂಗಳಲ್ಲಿ)

ಒಟ್ಟು ಮಾಸಿಕ ವಂತಿಕೆ

(1)

(2)

(3)

(4)

(5)

18

60

55

55

110

19

60

58

58

116

20

60

61

61

122

21

60

64

64

128

22

60

68

68

136

23

60

72

72

144

24

60

76

76

152

25

60

80

80

160

26

60

85

85

170

27

60

90

90

180

28

60

95

95

190

29

60

100

100

200

30

60

105

105

210

31

60

110

110

220

32

60

120

120

240

33

60

130

130

260

34

60

140

140

280

35

60

150

150

300

36

60

160

160

320

37

60

170

170

340

38

60

180

180

360

39

60

190

190

380

40

60

200

200

400

 

 

 1. ನೋಂದಣಿ ಮಾಡುವ ಪ್ರಕ್ರಿಯೆಯ ವಿಧಾನಗಳು
 • ಫಲಾನುಭವಿಯು ಅಗತ್ಯ ಮಾಹಿತಿಯೊಂದಿಗೆ ಕಾಮನ್ ಸರ್ವೀಸ್ ಸೆಂಟರ್‍ಗೆ (ಸಿಎಸ್‍ಸಿ) ತೆರಳುವುದು.
 • ಸಿಎಸ್‍ಸಿಯು ಫಲಾನುಭವಿಯನ್ನು ನೋಂದಾಯಿಸುವುದು.
 • ವಯಸ್ಸಿನ ಆಧಾರದ ಮೇಲೆ ವಂತಿಕೆಯು ಸ್ವಯಂ ಲೆಕ್ಕಾಚಾರ ಮಾಡಲಾಗುತ್ತದೆ.
 • ಪ್ರಥಮ ಕಂತನ್ನು ನಗದು ರೂಪ ಅಥವಾ ವ್ಯಾಲೆಟ್ ಮೂಲಕ ಪಾವತಿಸುವುದು.
 • ಹಣ ಪಾವತಿಯು ಯಶಸ್ವಿಯಾದ ನಂತರ ಆನ್‍ಲೈನ್ ಶ್ರಮಯೋಗಿ ಪೆನ್ಷನ್ ಸಂಖ್ಯೆಯನ್ನು ನೀಡಲಾಗುತ್ತದೆ.
 • ಸ್ವೀಕೃತಿ ಹಾಗೂ ಡೆಬಿಟ್ ಮ್ಯಾಂಡೆಟ್‍ಅನ್ನು ಫಲಾನುಭವಿಯ ಸಹಿಗಾಗಿ ಜನರೇಟ್ ಮಾಡಲಾಗುವುದು.
 • ಸಿಎಸ್‍ಸಿಯು ಸಹಿ ಮಾಡಿರುವ ಫಲಾನುಭವಿಯ ಡೆಬಿಟ್ ಮ್ಯಾಂಡೆಟ್‍ಅನ್ನು ಸ್ಕ್ಯಾನ್ ಮಾಡಿ ಅಪ್‍ಲೋಡ್‍ಮಾಡುತ್ತಾರೆ.
 • ಸಿಎಸ್‍ಸಿಯ ಸಿಬ್ಬಂದಿಗಳು ಶ್ರಮಯೋಗಿ ಕಾರ್ಡ್ ಅನ್ನು ಪ್ರಿಂಟ್ ಮಾಡಿ ಫಲಾನುಭವಿಗೆ ನೀಡುತ್ತಾರೆ.
 • ಬ್ಯಾಂಕಿನಿಂದ ದೃಢೀಕರಣ ಬಂದ ನಂತರ ಎಸ್‍ಎಸ್‍ಎಂಎಸ್ ಮೂಲಕ ಫಲಾನುಭವಿಗೆ ಮಾಹಿತಿ ನೀಡಲಾಗುತ್ತದೆ.

ಇತ್ತೀಚಿನ ನವೀಕರಣ​ : 31-01-2020 12:02 PM ಅನುಮೋದಕರು: Approver Ksuwssbಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080