ಅಭಿಪ್ರಾಯ / ಸಲಹೆಗಳು

ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ

ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ

ಯೋಜನೆಯ ವಿಶೇಷತೆಗಳು:

  • ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ ದೇಶದಲ್ಲಿಯೇ ಮೊದಲ ಬಾರಿಗೆ ಜಾರಿ.
  • ಎಲ್ಲಾ ಅರ್ಹ ಗಿಗ್ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳುವುದು. (ನೋಂದಾಯಿಸಲು ಇಲ್ಲಿ ಕ್ಲಿಕ್‌ ಮಾಡಿ)
  • ವಿಮಾ ಸೌಲಭ್ಯವು ಕರ್ತವ್ಯದಲ್ಲಿರುವಾಗ / ಇಲ್ಲದಿರುವಾಗ ಸಂಭವಿಸುವ ಅಪಘಾತಗಳಿಗೂ ಅನ್ವಯ.
  • ಯೋಜನೆಯು ಸಂಪೂರ್ಣ ಉಚಿತ, ಯಾವುದೇ ರೀತಿಯ ಪ್ರೀಮಿಯಂ ಪಾವತಿಸುವ ಅಗತ್ಯತೆ ಇಲ್ಲ.

ನೋಂದಣಿಗೆ ಅರ್ಹ ಕಾರ್ಮಿಕರು:-

ಸ್ವಿಗ್ಗಿ, ಜೊಮಾಟೋಗಳಂತಹ ಸಂಸ್ಥೆಗಳಲ್ಲಿ ಫುಡ್‌ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪ್ಲಿಫ್‌ಕಾರ್ಟ್, ಬಿಗ್‌ಬಾಸ್ಕೆಟ್, ಪೋರ್ಟರ್, ಫಾರ್ಮಸಿ, ಬ್ಲಿಂಕಿಟ್, ಜೆಪ್ಟೋ, ಬಿಗ್ ಬಾಸ್ಕೆಟ್, ಡಾಮಿನೋಜ್ ಮುಂತಾದ ಸಂಸ್ಥೆಗಳಲ್ಲಿ  ಡೆಲಿವರಿ ವೃತ್ತಿಯಲ್ಲಿ ತೊಡಗಿಕೊಂಡ ಎಲ್ಲಾ ಅಸಂಘಟಿತ ಗಿಗ್ ಕಾರ್ಮಿಕರು.

ದೊರಕುವ ಸೌಲಭ್ಯಗಳು:-

  • ಅಪಘಾದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ ರೂ2.00 ಲಕ್ಷ ಹಾಗೂ ಜೀವ ವಿಮೆ ರೂ 2.00 ಲಕ್ಷ ಸೇರಿ ಒಟ್ಟು ರೂ.4.00 ಲಕ್ಷಗಳು.
  • ಅಪಘಾದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ರೂ.2.00 ಲಕ್ಷಗಳವರೆಗೆ
  • ಆಸ್ಪತ್ರೆ ವೆಚ್ಚ ಮರುಪಾವತಿ ರೂ.1.00 ಲಕ್ಷಗಳವರೆಗೆ (ಅಪಘಾತ ಪ್ರಕರಣಗಳಿಗೆ ಮಾತ್ರ)
  • ಜೀವ ವಿಮಾ ರೂ.2.00 ಲಕ್ಷಗಳು.

 ನೋಂದಣಿಗೆ ಅರ್ಹತೆ:-

  • 18 ರಿಂದ 60 ವಯೋಮಾನದವರು.
  • ಆದಾಯ ತೆರಿಗೆ ಪಾವತಿದಾರರಾಗಿರಬಾರದು.
  • ಭವಿಷ್ಯನಿಧಿ ಹಾಗೂ ಇ.ಎಸ್.ಐ ಫಲಾನುಭವಿಯಾಗಿರಬಾರದು.
  • ಕರ್ನಾಟಕದಲ್ಲಿ ಗಿಗ್ ವೃತ್ತಿ (ಡೆಲಿವರಿ ಕಾರ್ಯ) ನಿರ್ವಹಿಸುತ್ತಿರುವವರಿಗೆ ಮಾತ್ರ.

ಅವಶ್ಯಕ ದಾಖಲೆಗಳು:-

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಕಾರ್ಮಿಕ ಸಹಾಯವಾಣಿ 155214 (24x7), ಕಾರ್ಮಿಕ ಅಧಿಕಾರಿಗಳು ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕರು/ ಕಾರ್ಮಿಕ ನಿರೀಕ್ಷಕರ ಕಛೇರಿಗಳು, ಕಾರ್ಮಿಕ ಇಲಾಖೆ.

 

ಸರ್ಕಾರಿ ಆದೇಶಕ್ಕಾಗಿ ಇಲ್ಲಿ ಕ್ಲಿಕ್‌ ಮಾಡಿ

ಇತ್ತೀಚಿನ ನವೀಕರಣ​ : 14-12-2023 03:36 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080