ಅಭಿಪ್ರಾಯ / ಸಲಹೆಗಳು

ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆ

ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆ

 

ಯೋಜನೆಯ ಉದ್ದೇಶ:

 ಅಸಂಘಟಿತ ವಲಯದ ವ್ಯಾಪ್ತಿಯಲ್ಲಿ ಬರುವ ದಿನಪತ್ರಿಕೆ ವಿತರಿಸುವ ಕಾರ್ಮಿಕರು ಅರೆಕಾಲೀನ ವೃತ್ತಿ ನಿರ್ವಹಿಸುತ್ತಿದ್ದು, ಪ್ರತಿನಿತ್ಯ ಸಾರ್ವಜನಿಕರ ಮನೆ ಬಾಗಿಲಿಗೆ ಪತ್ರಿಕೆಗಳನ್ನು ವಿತರಿಸುತ್ತಾರೆ. ಸದರಿ ಕಾರ್ಮಿಕರಲ್ಲಿ ಬಹುತೇಕರು ದಿನಪತ್ರಿಕೆ ವಿತರಿಸಲು ದ್ವಿಚಕ್ರ ವಾಹನಗಳನ್ನು ಬಳಸುತ್ತಿದ್ದು, ಅಪಘಾತಕ್ಕೊಳಗಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಸದರಿ ಕಾರ್ಮಿಕರಿಗೆ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ವಿತರಿಸುವ ಮೂಲಕ ಸಾಮಾಜಿಕ ಭದ್ರತೆ ಒದಗಿಸುವುದು ಯೋಜನೆಯ ಉದ್ದೇಶವಾಗಿರುತ್ತದೆ.

 ಯೋಜನೆಯ ಸೌಲಭ್ಯ ಪಡೆಯಲು ಅರ್ಹತೆ:-

  • ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
  • 16 ರಿಂದ 59 ವಯೋಮಾನದವರಾಗಿರಬೇಕು.
  • ಕೇಂದ್ರ ಸರ್ಕಾರದ ಇ-ಶ್ರಮ್ ಪೋರ್ಟಲ್‌ನಲ್ಲಿ “News Paper Boy” ಎಂಬ ವರ್ಗದಡಿ ನೋಂದಣಿಯಾಗಿರಬೇಕು.
  • ಆದಾಯ ತೆರಿಗೆ ಪಾವತಿದಾರರಾಗಿರಬಾರದು.
  • ಇ.ಎಸ್.ಐ ಮತ್ತು ಇ.ಪಿ.ಎಫ್ ಸೌಲಭ್ಯ ಹೊಂದಿರಬಾರದು.

 ದೊರಕುವ ಸೌಲಭ್ಯಗಳು:-

  • ಅಪಘಾತದಿಂದ ಮರಣ ಹೊಂದಿದಲ್ಲಿ ರೂ.2.00 ಲಕ್ಷ.
  • ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ರೂ.2.00 ಲಕ್ಷಗಳವರೆಗೆ (ಶೇಕಡವಾರು ದುರ್ಬಲತೆ ಆಧಾರದಮೇಲೆ).
  • ಅಪಘಾತ ಅಥವಾ ಮಾರಣಾಂತಿಕ ಕಾಯಿಲೆ ಅಥವಾ ಗಂಭೀರ ಅನಾರೋಗ್ಯಕ್ಕೆ ತುತ್ತಾದಲ್ಲಿ ಆಸ್ಪತ್ರೆ ವೆಚ್ಚ ಮರುಪಾವತಿ ರೂ.1.00 ಲಕ್ಷಗಳವರೆಗೆ.

 ಇತರೆ ಮಾಹಿತಿ:

  • ಎಲ್ಲಾ ಪತ್ರಿಕಾ ವಿತರಕರು ಇಂದೇ, ಇ-ಶ್ರಮ್ ಪೋರ್ಟಲ್ eshram.gov.in ಅಲ್ಲಿ ಸ್ವಯಂ ಆಗಿ ಅಥವಾ ಹತ್ತಿರದ ಸೇವಾ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ. (ನೋಂದಣಿ ವಿಧಾನಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ)
  • ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಅರ್ಹ ಫಲಾನುಭವಿಗಳು, ಯೋಜನೆಯಡಿ ನಿಗದಿಪಡಿಸಿದ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ ಸೌಲಭ್ಯಯನ್ನು ಪಡೆಯಬಹುದಾಗಿದೆ.

 ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಕಾರ್ಮಿಕ ಸಹಾಯವಾಣಿ 155214 (24x7), ಕಾರ್ಮಿಕ ಅಧಿಕಾರಿಗಳು ಹಾಗೂ ಹಿರಿಯಕಾರ್ಮಿಕ ನಿರೀಕ್ಷಕರು/ ಕಾರ್ಮಿಕ ನಿರೀಕ್ಷಕರ ಕಛೇರಿಗಳು, ಕಾರ್ಮಿಕ ಇಲಾಖೆ.

 

ಸರ್ಕಾರಿ ಆದೇಶಕ್ಕಾಗಿ ಇಲ್ಲಿ ಕ್ಲಿಕ್‌ ಮಾಡಿ

ಇತ್ತೀಚಿನ ನವೀಕರಣ​ : 16-12-2023 11:58 AM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080