ಅಭಿಪ್ರಾಯ / ಸಲಹೆಗಳು

ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟೀಯ ದತ್ತಾಂಶ (ಇ-ಶ್ರಮ್)

ಪೀಠಿಕೆ:-


2017-18ನೇ ಸಾಲಿನಲ್ಲಿ ರಾಷ್ಟ್ರೀಯ ಅಂಕಿ ಅಂಶಗಳ ಕಛೇರಿ (National Statistical Office) ಯು ನಡೆಸಿದ ಸಮೀಕ್ಷೆಯ ಪ್ರಕಾರ ಭಾರತದಾದ್ಯಂತ ಸುಮಾರು 38 ಕೋಟಿ ಕಾರ್ಮಿಕರು ಅಸಂಘಟಿತ ವರ್ಗಗಳಲ್ಲಿ ತೊಡಗಿಕೊಂಡಿರುತ್ತಾರೆ. ಪ್ರಸ್ತುತ ಅಸಂಘಟಿತ ಕಾರ್ಮಿಕರ ಕೇಂದ್ರಕೃತ ದತ್ತಾಂಶ ಲಭ್ಯವಿರುವುದಿಲ್ಲ. ಅಂತಹ ಕೇಂದ್ರೀಕೃತ ದತ್ತಾಂಶದ ಅಲಭ್ಯತೆಯ ಕಾರಣ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ, ವಲಸೆ ಕಾರ್ಮಿಕರು ಹಾಗೂ ಕಟ್ಟಡ ಕಾರ್ಮಿಕರು ಸೇರಿದಂತೆ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸಂಬಂಧಿಸಿದ ಸಮಸ್ಯೆಗಳ ನಿವಾರಣೋಪಾಯ ಕಲ್ಪಿಸುವುದು ಕಷ್ಟ ಸಾಧ್ಯವಾಗಿರುತ್ತದೆ. ಅಸಂಘಟಿತ ಹಾಗೂ ವಲಸೆ ಕಾರ್ಮಿಕರ ಸಮಗ್ರ ದತ್ತಾಂಶವು ಅವರಿಗೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ವಿಸ್ತರಿಸಲು ಸಹಾಯಕವಾಗಿರುತ್ತದೆ. ಕಾರ್ಮಿಕ ವರ್ಗಗಳಲ್ಲಿ ಅತ್ಯಂತ ದುರ್ಬಲ ವರ್ಗದವರಾದ ವಲಸೆ ಕಾರ್ಮಿಕರು ಸೇರಿದಂತೆ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ಸಮಗ್ರ ದತ್ತಾಂಶವನ್ನು ಸಿದ್ದಪಡಿಸಲು ಕ್ರಮ ಕೈಗೊಂಡಿದೆ.

 

ಇ-ಶ್ರಮ ಪೋರ್ಟಲ್:-

ಆಧಾರ್ ಸಂಖ್ಯೆಗೆ ಜೋಡಣೆಯಾದ ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ದತ್ತಾಂಶವನ್ನು ಸಿದ್ದಪಡಿಸಲು, ಕಾರ್ಮಿಕ ಹಾಗೂ ಉದ್ಯೋಗ ಮಂತ್ರಾಲಯವು ಇ-ಶ್ರಮ ಪೋರ್ಟಲ್ ಅನ್ನು (www.eshram.gov.in) ಅಭಿವೃದ್ಧಿಪಡಿಸಿರುತ್ತದೆ. ಇದು ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯಗಳನ್ನು ವಿಸ್ತರಿಸಲು ಅನುಕೂಲವಾಗುವಂತೆ ಕಾರ್ಮಿಕರ ಹೆಸರು, ವೃತ್ತಿ, ವಿಳಾಸ, ವಿದ್ಯಾರ್ಹತೆ, ಕೌಶಲ್ಯದ ವಿಧ, ಕುಟುಂಬದ ವಿವರ, ಬ್ಯಾಂಕ್ ಖಾತೆ ವಿವರ ಇತ್ಯಾದಿ ವಿವರಗಳನ್ನು ಒಳಗೊಂಡಿರುತ್ತದೆ.

 

ಅಸಂಘಟಿತ ಕಾರ್ಮಿಕರ ವರ್ಗಗಳು:-

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಮೀನುಗಾರರು, ಆಶಾ ಕಾರ್ಯಕರ್ತೆಯರು, ಮನೆಗೆಲಸ ಕಾರ್ಮಿಕರು, ಚಾಲಕರು, ಟೈಲರ್‍ಗಳು, ಬೀದಿಬದಿ ವ್ಯಾಪಾರಿಗಳು ಸೇರಿದಂತೆ ಕೇಂದ್ರ ಸರ್ಕಾರವು ಗುರುತಿಸಿರುವ ಸುಮಾರು 379 ವರ್ಗಗಳ ಕಾರ್ಮಿಕರು  ನೋಂದಣಿಯಾಗಬಹುದಾಗಿದೆ. (ಅಸಂಘಟಿತ ವರ್ಗಗಳ ಪಟ್ಟಿಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ).

 

ನೋಂದಣಿಯ ಪ್ರಯೋಜನಗಳು:-

  • ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಯೋಜನೆಗಳನ್ನು ಪಡೆಯಲು.
  • ದತ್ತಾಂಶವು ಸರ್ಕಾರಕ್ಕೆ ಅಸಂಘಟಿತ ಕಾರ್ಮಿಕರಿಗೆ ವಿಶೇಷ ನೀತಿಗಳು ಹಾಗೂ ಯೋಜನೆಗಳನ್ನು ರೂಪಿಸಲು ಸಹಾಯಕ.
  • ರಾಷ್ಟ್ರೀಯ ವಿಪತ್ತು ಅಥವಾ ಕೋವಿಡ್-19ರ ಸಾಂಕ್ರಾಮಿಕ ಪಿಡುಗಿನಂತಹ ಪರಿಸ್ಥಿತಿಯಲ್ಲಿ, ಅರ್ಹ ಕಾರ್ಮಿಕರಿಗೆ ನೆರವು ನೀಡಲು ದತ್ತಾಂಶವನ್ನು ಬಳಸಿಕೊಳ್ಳಬಹುದಾಗಿದೆ.

 

ನೋಂದಣಿಗೆ ಅರ್ಹತೆ:-

  • 16 ರಿಂದ 59 ವಯೋಮಾನದವರು.
  • ಆದಾಯ ತೆರಿಗೆ ಪಾವತಿದಾರರಾಗಿರಬಾರದು.
  • ಭವಿಷ್ಯನಿಧಿ ಹಾಗೂ ಇ.ಎಸ್.ಐ ಫಲಾನುಭವಿಯಾಗಿರಬಾರದು.

 

ಅವಶ್ಯಕ ದಾಖಲೆಗಳು:-

  • ಆಧಾರ್ ಕಾರ್ಡ್.
  • ಆಧಾರ್ ಸಂಖ್ಯೆಗೆ ಜೋಡಣೆಯಾದ ಮೊಬೈಲ್ ಸಂಖ್ಯೆ.
  • ಬ್ಯಾಂಕ್ ಖಾತೆ ವಿವರಗಳು.

 

ನೋಂದಣಿ ವಿಧಾನ:-

ಇ-ಶ್ರಮ್ ಪೋರ್ಟಲ್‍ನಲ್ಲಿ ನೋಂದಣಿಯು ಉಚಿತವಾಗಿದ್ದು, ಯಶಸ್ವಿ ನೋಂದಣಿಯ ನಂತರ ಫಲಾನುಭವಿಗಳು ಸ್ಥಳದಲ್ಲಿಯೆ ಗುರುತಿನ ಚೀಟಿಯನ್ನು (UAN) ಪಡೆಯಬಹುದಾಗಿದೆ. ಇದು ದೇಶದಾದ್ಯಂತ ಹಾಗೂ ಜೀವಿತಾವಧಿಯ ಮಾನ್ಯತೆ ಹೊಂದಿರುತ್ತದೆ.

 


ಹೆಚ್ಚಿನ ಮಾಹಿತಿ/ಸಹಾಯಕ್ಕಾಗಿ ಸಂಪರ್ಕಿಸಿ:-


• ಕಾರ್ಮಿಕ ಸಹಾಯವಾಣಿ 155214 (24x7).
• ಇ-ಶ್ರಮ್ ಸಹಾಯ ವಾಣಿ 14434 (ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 08:00 ರಿಂದ ರಾತ್ರಿ 08:00ರವರೆಗೆ)
• ದೂರುಗಳನ್ನು ಸಲ್ಲಿಸಲು URL: www.gms.eshram.gov.in ಗೆ ಭೇಟಿ ನೀಡುವುದು.
• ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳ ಮಾಹಿತಿಯನ್ನು ಪಡೆಯಲು https://findmycsc.nic.in/csc/ ವೀಕ್ಷಿಸಿ.

 

ಇತ್ತೀಚಿನ ನವೀಕರಣ​ : 23-01-2024 03:45 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080